ಒಗಟೆಯೇನೀ ಸೃಷ್ಟಿ? ಬಾಳಿನರ್ಥವದೇನು?
ಬಗೆದು ಬಿಡಿಸುವರಾರು ಸೋಜಿಗವನಿದನು ?
ಜಗವ ನಿರವಿಸಿದ ಕೈಯೊಂದಾದೊಡೇಕಿಂತು
ಬಗೆ ಬಗೆಯ ಜೀವಗತಿ ? – ಮಂಕುತಿಮ್ಮ || 6