Listen

Description

ಭೂವಿುಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಅದರ ನಿವಾಸಿಗಳೂ ಆತನವೇ. ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು; ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ. ಯೆಹೋವನ ಪರ್ವತವನ್ನು ಹತ್ತತಕ್ಕವನು ಯಾರು? ಆತನ ಪವಿತ್ರಸ್ಥಾನದಲ್ಲಿ ನಿಲ್ಲುವದಕ್ಕೆ ಎಂಥವನು ಯೋಗ್ಯನು? ಯಾವನು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ ಮೋಸಪ್ರಮಾಣಮಾಡದೆ ಶುದ್ಧಹಸ್ತವೂ ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ ಅವನೇ ಯೆಹೋವನಿಂದ ಶುಭವನ್ನು ಹೊಂದುವನು; ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು. Psalms / ಕೀರ್ತನೆಗಳು 24 : 1 - 5