ಅಬ್ರಹಾಮನ ಕಾಲದಲ್ಲಿ ಬಂದ ಮೊದಲನೆಯ ಬರವಲ್ಲದೆ ಇನ್ನೂ ಒಂದು ಬರವು ಕಾನಾನ್‍ದೇಶಕ್ಕೆ ಬಂತು. ಆಗ ಇಸಾಕನು ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಗೆರಾರಿಗೆ ಹೋದನು. ಅಲ್ಲಿ ಯೆಹೋವನು ಅವನಿಗೆ ದರ್ಶನಕೊಟ್ಟು - ನೀನು ಐಗುಪ್ತದೇಶಕ್ಕೆ ಇಳಿದುಹೋಗಬೇಡ; ನಾನು ಹೇಳುವ ದೇಶದಲ್ಲಿ ನೀನು ವಾಸಮಾಡಬೇಕು. ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. Genesis / ಆದಿಕಾಂಡ 26 : 1 - 3