ಯೆಹೋವನು ಯೋಸೇಫನ ಸಂಗಡವಿದ್ದು ಅವನು ಮಾಡುವ ಕೆಲಸವನ್ನೆಲ್ಲಾ ಸಫಲವಾಗುವಂತೆ ಮಾಡುತ್ತಾನೆಂದು ಅವನ ದಣಿಯು ತಿಳಿದು ಅವನ ಮೇಲೆ ದಯೆ ಇಟ್ಟು ಅವನನ್ನು ಸ್ವಂತ ಸೇವಕನನ್ನಾಗಿ ನೇವಿುಸಿಕೊಂಡನು. ಇದಲ್ಲದೆ ಆ ದಣಿಯು ಅವನಿಗೆ ತನ್ನ ಮನೆಯಲ್ಲಿ ಪಾರುಪತ್ಯವನ್ನು ಕೊಟ್ಟು ತನ್ನ ಆಸ್ತಿಯನ್ನೆಲ್ಲಾ ಅವನ ವಶಕ್ಕೆ ಒಪ್ಪಿಸಿದನು. ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ ಆಸ್ತಿಯ ಮೇಲೆಯೂ ಅಧ್ಯಕ್ಷನಾಗಿ ಇಟ್ಟಂದಿನಿಂದ ಯೆಹೋವನು ಯೋಸೇಫನ ನಿವಿುತ್ತವಾಗಿ ಆ ಐಗುಪ್ತ್ಯನ ಮನೆಯನ್ನು ಅಭಿವೃದ್ಧಿಗೆ ತಂದನು. Genesis / ಆದಿಕಾಂಡ 39 : 3 - 5