Listen

Description

ಆತನು ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು. 6ನೀವು ಶೂರರಾಗಿ ಧೈರ್ಯದಿಂದಿರ್ರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವದಿಲ್ಲ, ಅಪಜಯಕ್ಕೆ ಗುರಿಪಡಿಸುವದೇ ಇಲ್ಲ ಎಂದು ಹೇಳಿದನು. ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲ್ಯರೆಲ್ಲರ ಮುಂದೆ ಅವನಿಗೆ - ಯೆಹೋವನು ಇವರ ಪಿತೃಗಳಿಗೆ ಪ್ರಮಾಣ ಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದದರಿಂದ ಶೂರನಾಗಿ ಧೈರ್ಯದಿಂದಿರು; ಯೆಹೋವನು ತಾನೇ ನಿನ್ನ ಮುಂದುಗಡೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವದೇ ಇಲ್ಲ, ಕೈಬಿಡುವದಿಲ್ಲ; ಅಂಜಬೇಡ, ಧೈರ್ಯದಿಂದಿರು ಎಂದು ಹೇಳಿದನು. Deuteronomy / ಧರ್ಮೋಪದೇಶಕಾಂಡ 31 : 5 - 8

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Deuteronomy31v5