Listen

Description

ಜಾಗತಿಕ ಅನುಭಾವ ಮಂಟಪದ ವಚನಾನುಭಾವ 12-ಜುಲೈ 2020

ಕಾನ್ಫರೆನ್ಸ್ ಕಾಲ್ ನಲ್ಲಿ ಇಂದಿನ ವಿಷಯ:-> ಅರಿವು.ನಿಜಾನುಭಾವಸಂಪಾದನೆ, ಸರ್ವಸಂದೇಹ ನಿವಾರಣೆ. ದೇವಸ್ಥಲ. ಪಿಂಡಸ್ಥಲ. ದೇವನ ಇರುವು. ಶಬ್ದದೊಳಗಣ ನಿಶ್ಯಬ್ದ. ಶರಣ ಸಂಬಂಧ

ವಚನ ಚಿಂತನೆ: ಶಿವಶರಣಪ್ಪ. ಮದ್ದೂರು. 

Jagatika Anubhava Mantapa.

Vachanaanubhaava Date: 12 July 2020 Podcast

ನಿರ್ವಚಿಸಲ್ಪಟ್ಟ ವಚನಗಳು: 

1. ವೇದ ಘನವೆಂಬುದೊಂದು ಸಂಪಾದನೆ. ಶಾಸ್ತ್ರ ಘನವೆಂಬುದೊಂದು ಸಂಪಾದನೆ. ಪುರಾಣ ಘನವೆಂಬುದೊಂದು ಸಂಪಾದನೆ. ಆಗಮ ಘನವೆಂಬುದೊಂದು ಸಂಪಾದನೆ. ಅಹುದೆಂಬುದೊಂದು        ಸಂಪಾದನೆ. ಅಲ್ಲವೆಂಬುದೊಂದು ಸಂಪಾದನೆ. ಗುಹೇಶ್ವರನೆಂಬ ಮಹಾಘನದ ನಿಜಾನುಭಾವಸಂಪಾದನೆಯ ಅರಿಯದ ಕಾರಣ ಹಲವು ಸಂಪಾದನೆಗಳಾದವು

2. ಅಂಗವೆಂಬ ಸಂಸಾರದೊಳಗೆ ಸವೆದವರೆಲ್ಲರೂ ಶಿವನನರಿವರೆ ? ಮನವೆಂಬ ಸಂಕಲ್ಪದ ಕುಣಿಕೆಗೊಳಗಾದವರೆಲ್ಲರೂ ಮಾಯದ ಹೊಡೆಗಿಚ್ಚ ಗೆಲ್ಲಬಲ್ಲರೆ ?

        ಗುಹೇಶ್ವರಲಿಂಗದಲ್ಲಿ ಸರ್ವಸಂದೇಹವ ಕಳೆದಿಪ್ಪ ಚನ್ನಬಸವಣ್ಣಂಗೆ ನಮೋ ನಮೋ ಎಂಬೆನು. 9. ಶಿಲೆಯೊಳಗಣ ಪಾವಕನಂತೆ ಉದಕದೊಳಗಣ ಪ್ರತಿಬಿಂಬದಂತೆ,

        ಬೀಜದೊಳಗಣ ವೃಕ್ಷದಂತೆ ಶಬ್ದದೊಳಗಣ ನಿಶ್ಶಬ್ದದಂತೆ, ಗುಹೇಶ್ವರಾ ನಿಮ್ಮ ಶರಣಸಂಬಂಧ

3. ನೆಲದ ಮರೆಯ ನಿಧಾನದಂತೆ, ಮುಗಿಲ ಮರೆಯಲಡಗಿದ ಮಿಂಚಿನಂತೆ, ಬಯಲ ಮರೆಯಲಡಗಿದ ಮರೀಚನಂತೆ? ಕಂಗಳ ಮರೆಯಲಡಗಿದ ಬೆಳಗಿನಂತೆ_ಗುಹೇಶ್ವರಾ ನಿಮ್ಮ ನಿಲವು!

4. ಉದಕದೊಳಗೆ ಬಯ್ಚಿಟ್ಟ ಬಯ್ಕೆಯ ಕಿಚ್ಚಿನಂತಿದ್ದಿತ್ತು, ಸಸಿಯೊಳಗಣ ರಸದ ರುಚಿಯಂತಿದ್ದಿತ್ತು, ನನೆಯೊಳಗಣ ಪರಿಮಳದಂತಿದ್ದಿತ್ತು, ಕೂಡಲಸಂಗಮದೇವ ಕನ್ನೆಯ ಸ್ನೇಹದಂತಿದ್ದಿತ್ತು.

5. ಫಲದೊಳಗಣ ಮಧುರಗೋಪ್ಯದಂತಿದ್ದಿತ್ತು, ಚಂದ್ರಕಾಂತದ ಉದಕದ ತೆರನಂತಿದ್ದಿತ್ತು, ಮಯೂರನ ತತ್ತಿಯ ಚಿತ್ರದಂತಿದ್ದಿತ್ತು, ಶಿಶುಕಂಡ ಕನಸಿನ ಪರಿಯಂತಿದ್ದಿತ್ತು,

       ಕೂಡಲಚೆನ್ನಸಂಗಯ್ಯಾ ನಿಮ್ಮ ನಿಲವ ಸದ್ಗುರುಚಿತ್ತದ ಪದದಂತಿದ್ದಿತ್ತು.

6. ಕಲ್ಲೊಣಗಣ ಕಿಚ್ಚು ಉರಿಯದಂತೆ, ಬೀಜದೊಳಗಣ ವೃಕ್ಷ ಉಲಿಯದಂತೆ, ತೋರಲಿಲ್ಲಾಗಿ ಬೀರಲಿಲ್ಲಾರಿಗೆಯು, ಗುಹೇಶ್ವರ ನಿಂದ ನಿಲವ ಅನುಭಾವ ಸುಖಿ ಬಲ್ಲ