ವಚನಾನುಭಾವ-ದಿನಾಂಕ 18 ಜುಲೈ 2020-ಭಾಗ 1
ಜಾಗತಿಕ ಅನುಭಾವ ಮಂಟಪದಲ್ಲಿ ಚರ್ಚೆಯ ವಿಷಯ: ಭ್ರಾಂತಿನ ಭ್ರಮೆ, ಶರಣ ತತ್ವ, ಉದಯ, ಅಂದಿಂಗೆಳೆಯ ನೀನು ಹಳೆಯ ನಾನು, 36 ತತ್ವಗಳ ಚಾರ್ಟ್.
ಚಿಂತನೆ: ಶಿವಶರಣಪ್ಪ ಮದ್ದೂರ್
Jagatika Anubhaava Mantapa Conference Call Date 18 July 2020
Discourse by: Shivasharanappa Maddur.
ನಿರ್ವಾಚಿಸಲ್ಪಟ್ಟ ವಚನ:
ಅಜ್ಞಾನಿಯಾದವಂಗೆ ಅರಿವು ತಾನೆಲ್ಲಿಯದೊ ?
ಸುಜ್ಞಾನಿಯಾದವಂಗೆ ಮರಹು ತಾನೆಲ್ಲಿಯದೊ ?
ನಾನರಿದೆನೆಂಬಾತ ಇದಿರ ಕೇಳಲುಂಟೆ ?
ಭ್ರಾಂತಿನ ಭ್ರಮೆಯೊಳಗೆ ಬಳಲುತ್ತಿರಲು
ಮಾತಿನ ಮಾತಿನೊಳಗೆ ಅರಿವೆಂಬುದುಂಟೆ ?
ಸೂತಕ ಹಿಂಗದೆ ಸಂದೇಹವಳಿಯದೆ,
ಮುಂದಣ ಸೂಕ್ಷ್ಮವ ಕಾಬ ಪರಿಯೆಂತೊ?
ಜ್ಯೋತಿಯ ಬಸಿರೊಳಗೆ ಜನಿಸಿದ
ಕಾಂತಿಯುತ ಬೆಳಗು ಗುಹೇಶ್ವರಾ ನಿಮ್ಮ ಶರಣ !
2. ಆದಿ ಆಧಾರವಿಲ್ಲದಂದು, ಹಮ್ಮುಬಿಮ್ಮುಗಳಿಲ್ಲದಂದು
ಸುರಾಳನಿರಾಳವಿಲ್ಲದಂದು, ಸಚರಾಚರವೆಲ್ಲ ರಚನೆಗೆ ಬಾರದಂದು,
ಗುಹೇಶ್ವರಾ ನಿಮ್ಮ ಶರಣನುದಯಿಸಿದನಂದು.
3. ಅಜ್ಞಾನವೆಂಬತೊಟ್ಟಿಲೊಳಗೆ, ಜ್ಞಾನವೆಂಬ ಶಿಶುವ ಮಲಗಿಸಿ,
ಸಕಲ ವೇದಶಾಸ್ತ್ರವೆಂಬ ನೇಣ ಕಟ್ಟಿ,
ಹಿಡಿದು ತೂಗಿ ಜೋಗುಳವಾಡುತ್ತಿದ್ದಾಳೆ ಭ್ರಾಂತಿಯೆಂಬ ತಾಯಿ !
ತೊಟ್ಟಿಲು ಮುರಿದು ನೇಣು ಹರಿದು, ಜೋಗುಳ ನಿಂದಲ್ಲದೆ,
ಗುಹೇಶ್ವರನೆಂಬ ಲಿಂಗವ ಕಾಣಬಾರದು