Listen

Description

ಕ್ರಿಸ್ತನಿಂದ ಉತ್ತೇಜನ, ಪ್ರೀತಿಯ ಪ್ರೇರಣೆ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವವಾದರೆ ಐಕಮತ್ಯವುಳ್ಳವರಾಗಿದ್ದು ನನ್ನ ಸಂತೋಷವನ್ನು ಪರಿಪೂರ್ಣಮಾಡಿರಿ. ನಿಮ್ಮೆಲ್ಲರಲ್ಲಿ ಒಂದೇ ಪ್ರೀತಿಯಿರಲಿ; ಅನ್ಯೋನ್ಯಭಾವವುಳ್ಳವರೂ ಒಂದೇ ಗುರಿಯಿಟ್ಟುಕೊಂಡವರೂ ಆಗಿರ್ರಿ. ಪಕ್ಷಪಾತದಿಂದಾಗಲಿ ಒಣಹೆಮ್ಮೆಯಿಂದಾಗಲಿ ಯಾವದನ್ನೂ ಮಾಡದೆ ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ. ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ. ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ. ಆತನು ದೇವಸ್ವರೂಪನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವದೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸದೃಶನಾದನು. Philippians / ಫಿಲಿಪ್ಪಿಯವರಿಗೆ 2 : 1 - 7

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Philippians2v1 #11September2024 #promisewordforseptember